Friday, 23 August 2013

Vishwa Maanava Sandesha !!

I feel this message from Kuvempu is very essential for all of us in this modern Context ! so the Old post(first post in this blog) re-appearing 
ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:
ಕುವೆಂಪು


ಸಪ್ತಸೂತ್ರ
  1. “ಮನುಷ್ಯಜಾತಿ ತಾನೊ೦ದೆ ವಲ೦” ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
  2. ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
  3. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
  4. ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
  5. ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
  6. ಮತ ಗು೦ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ೦ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ೦ಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅ೦ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ೦ಖ್ಯೆಯ ಮತಗಳಿರುವ೦ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು೦ಪುಕಟ್ಟಿ ಜಗಳ ಹಚ್ಚುವ೦ತಾಗಬಾರದು.
  7. ಯಾವ ಒ೦ದು ಗ್ರ೦ಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು -ಕುವೆಂಪು

No comments:

Post a Comment

Kannada Film Stars: News and Views !!